ಮುಚ್ಚಿ

ಹಾರಂಗಿ ವೃಕ್ಷೋದ್ಯಾನ ಮತ್ತು ಸಾಕಾನೆ ಶಿಬಿರ

ನಿರ್ದೇಶನ
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಅ.8.2022 ರಂದು ಲೋಕಾರ್ಪಣೆಯಾಗಿದ್ದು, ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆಯಲ್ಲಿ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲಾಗಿದೆ. ದುಬಾರೆಯಿಂದ 15 ಸಾಕಾನೆಗಳನ್ನು ಹಾರಂಗಿಗೆ ಸ್ಥಳಾಂತರಿಲಾಗಿದೆ. ಹಾರಂಗಿ ಅಣೆಕಟ್ಟೆಗೆ ಈ ಶಿಬಿರ ಸ್ಥಾಪನೆಯಿಂದ ಮತ್ತಷ್ಟು ಮೆರುಗು ಹೆಚ್ಚಾಗಿದೆ. ಹಾರಂಗಿ ಹಿನ್ನೀರಿನಲ್ಲಿ ಪೆಡಲ್ ಬೋಟ್ಗಳಿದ್ದು, ಪ್ರವಾಸಿಗರಿಗೆ ಬೋಟ್ಂಗ್ ಮಾಡಬಹುದು. ಹಿನ್ನೀರು ಪ್ರದೇಶದಲ್ಲಿ ಸೂರ್ಯಾಸ್ತ ವೀಕ್ಷಿಸಲು ವೀವ್ ಪಾಯಿಂಟ್ ಸಿದ್ಧಪಡಿಸಿ ಪ್ರವಾಸಿಗರಿಗೆ ಕುಳಿತುಕೊಳ್ಳಲು ಬೆಂಚ್ಗಳನ್ನು ಹಾಕಲಾಗಿದೆ.